ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರಿಂದ ಗ್ರೆನೇಡ್‌ ದಾಳಿ: 12 ನಾಗರಿಕರಿಗೆ ಗಾಯ

Last Updated 18 ನವೆಂಬರ್ 2020, 15:25 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಗ್ರೆನೇಡ್‌ ದಾಳಿಯಲ್ಲಿ 12 ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪುಲ್ವಾಮಾದ ಕಾಕಪೊರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಉಗ್ರರು ಭದ್ರತಾ ಪಡೆ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್‌ ಎಸೆದಿದ್ದರು. ಆದರೆ ಇದು ಗುರಿ ತಪ್ಪಿ ರಸ್ತೆಯಲ್ಲಿ ಸ್ಫೋಟಗೊಂಡಿದೆ. ಸ್ಫೋಟಕ್ಕೆ ನಾಗರಿಕರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ದಾಳಿ ನಡೆಸಿದ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಈ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದಾರೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT