ಭಾನುವಾರ, ಡಿಸೆಂಬರ್ 5, 2021
27 °C

ನವದೆಹಲಿ: ಬುರಾರಿಯ ಮನೆಯೊಂದರಲ್ಲಿ ಅಗ್ನಿ ಅವಘಡ, 12 ವರ್ಷದ ಬಾಲಕ ಪುನೀತ್ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಶುಕ್ರವಾರ ಸಂಜೆ ನವದೆಹಲಿಯ ಬುರಾರಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 12 ವರ್ಷದ ಬಾಲಕ ಸಾವಿಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೋಮರ್ ಕಾಲೋನಿಯಲ್ಲಿರುವ ಮನೆಯ ಮೊದಲ ಮಹಡಿಯಲ್ಲಿ ಇರಿಸಲಾಗಿದ್ದ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ರಾತ್ರಿ 8.54ಕ್ಕೆ ಘಟನೆಯ ಬಗ್ಗೆ ಅವರಿಗೆ ಮಾಹಿತಿ ಬಂದಿದೆ. ನಂತರ ಮೂರು ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸಲು ಸ್ಥಳಕ್ಕೆ ಕಳುಹಿಸಲಾಗಿದೆ.

ಮೃತ ಬಾಲಕನನ್ನು 12 ವರ್ಷದ ಪುನೀತ್ ಎಂದು ಗುರುತಿಸಲಾಗಿದ್ದು, ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು