ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಫಾ: ಸಂಪರ್ಕಿತರ ಮೇಲೆ ನಿಕಟ ನಿಗಾ

ಕೋವಿಡ್‌ ಸಾಂಕ್ರಾಮಿಕದ ನಡುವೆಯೇ ಎದುರಾದ ಮತ್ತೊಂದು ಸವಾಲು
Last Updated 5 ಸೆಪ್ಟೆಂಬರ್ 2021, 19:33 IST
ಅಕ್ಷರ ಗಾತ್ರ

ಕೋಯಿಕ್ಕೋಡ್:ಕೋಯಿಕ್ಕೋಡ್‌ನಲ್ಲಿ ನಿಫಾ ವೈರಾಣು ಸೋಂಕಿನಿಂದ ಮೃತಪಟ್ಟ 12 ವರ್ಷದ ಬಾಲಕನ ಸಂಪರ್ಕಕ್ಕೆ ಬಂದ 188 ಮಂದಿಯನ್ನು ಗುರುತಿಸಲಾಗಿದೆ.

‘ಬಾಲಕನ ಸಂಪರ್ಕಕ್ಕೆ ಬಂದಿದ್ದ ಆಸ್ಪತ್ರೆಯ ಇಬ್ಬರು ಸಿಬ್ಬಂದಿಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಆ ಬಾಲಕನ ಸಂಪರ್ಕಕ್ಕೆ ಬಂದಿದ್ದ ಹಲವರಲ್ಲಿ 20 ಮಂದಿಗೆ ವೈರಸ್‌ ತಗುಲುವ ಸಾಧ್ಯತೆ ಅತಿಹೆಚ್ಚು’ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

‘ಕೋಯಿಕ್ಕೋಡ್‌ನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಒಬ್ಬರಿಗೆ ಮತ್ತು ಕೋಯಿಕ್ಕೋಡ್ ಜಿಲ್ಲಾ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ಸಿಬ್ಬಂದಿಯಲ್ಲಿ ನಿಫಾ ಲಕ್ಷಣಗಳು ಕಾಣಿಸಿಕೊಂಡಿವೆ. ಈ ಇಬ್ಬರೂ ಸೇರಿ, ಸೋಂಕು ತಗುಲುವ ಸಾಧ್ಯತೆ ಹೆಚ್ಚು ಇದ್ದ 20 ಮಂದಿಯನ್ನು ಕೋಯಿಕ್ಕೋಡ್ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಆಸ್ಪತ್ರೆಯ ಒಂದು ವಾರ್ಡ್‌ ಅನ್ನು ನಿಫಾ ವಾರ್ಡ್ ಆಗಿ ಪರಿವರ್ತಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಕೋವಿಡ್‌ ರೋಗಿಗಳ ಸಂಪರ್ಕಿತ
ರನ್ನು ಪತ್ತೆ ಮಾಡಲು ಅನುಸರಿಸಿದ ಮಾದರಿಯನ್ನೇ ನಿಫಾ ವೈರಸ್‌ ರೋಗಿಯ ಸಂಪರ್ಕಿತರನ್ನು ಪತ್ತೆ ಮಾಡಲೂ ಬಳಸಲಾಗಿದೆ. ಹೀಗಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಲು ಸಾಧ್ಯ
ವಾಗಿದೆ. ಸೋಂಕು ತಗಲುವ ಸಾಧ್ಯತೆ ಹೆಚ್ಚು ಇರುವವರನ್ನು ಹೊರತುಪಡಿಸಿ, ಉಳಿದೆವರೆಲ್ಲರನ್ನೂ ಮನೆಯಲ್ಲಿಯೇ ಕ್ವಾರಂಟೈನ್‌ ಇರಲು ಸೂಚಿಸಲಾಗಿದೆ. ಅವರಲ್ಲೂ ಲಕ್ಷಣಗಳು ಕಂಡುಬಂದರೆ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ನಿಫಾ ವೈರಸ್‌ನಿಂದ ಮೃತಪಟ್ಟ ಬಾಲಕನ ಅಂತ್ಯಕ್ರಿಯೆಯನ್ನು ಭಾನುವಾರ ಮಧ್ಯಾಹ್ನ ನಡೆಸಲಾಗಿದೆ. ವೈರಸ್ ತಗುಲುವುದನ್ನು ತಡೆಯುವ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳ
ಲಾಗಿದೆ. 12 ಅಡಿ ಆಳದ ಗುಂಡಿಯಲ್ಲಿ ಬಾಲಕನ ಶವವನ್ನು ವೈಜ್ಞಾನಿಕ ರೀತಿಯಲ್ಲಿ ಹೂಳಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

‘2018ರ ಮೇನಲ್ಲಿ ಕೋಯಿಕ್ಕೋಡ್‌
ನಲ್ಲಿ ಮೊದಲ ಬಾರಿ ನಿಫಾ
ವೈರಸ್ ಕಾಣಿಸಿಕೊಂಡಿತ್ತು. ಈಗ ಎರಡನೇ ಬಾರಿ ನಿಫಾ ವೈರಸ್ ಅದೇ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು ಏಕೆ ಎಂಬುದರ ಬಗ್ಗೆ ಅಧ್ಯಯನ ನಡೆಸಲು ತಂಡ ರಚಿಸಲಾಗಿದೆ. ಮುಂದೆ ಮತ್ತೆ ಈ ವೈರಸ್‌ ಬರುವುದನ್ನು ಹೇಗೆ ತಡೆಯಬಹುದು ಎಂಬುದನ್ನು ಕಂಡುಕೊಳ್ಳಲು ಈ ಅಧ್ಯಯನವು ಸಹಕಾರಿಯಾಗಲಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT