ಪುದುಚೇರಿಯಲ್ಲಿ 20 ಮಕ್ಕಳಲ್ಲಿ ಕೊರೊನಾ ಸೋಂಕು ದೃಢ; ಆಸ್ಪತ್ರೆಗೆ ದಾಖಲು

ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ 20 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಎಸ್. ಮೋಹನ್ ಕುಮಾರ್, ಮಕ್ಕಳಲ್ಲಿ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಗೊಂಡಿದೆ ಎಂದು ಹೇಳಿದ್ದಾರೆ.
20 ಮಕ್ಕಳನ್ನು ಕದಿರ್ಕಮಂನಲ್ಲಿರುವ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಇದನ್ನೂ ಓದಿ: ಕೇರಳ: ಮತ್ತೆ ಐವರಲ್ಲಿ ಝೀಕಾ ವೈರಸ್ ಪತ್ತೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.