ಶನಿವಾರ, ಜನವರಿ 23, 2021
26 °C

20 ಕಾಗೆಗಳ ಸಾವು: ದೆಹಲಿಯಲ್ಲಿಯೂ ಹಕ್ಕಿ ಜ್ವರ ಭೀತಿ

ಪಿಟಿಐ Updated:

ಅಕ್ಷರ ಗಾತ್ರ : | |

Bird flu

ನವದೆಹಲಿ: ಕಳೆದ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 20 ಕಾಗೆಗಳು ಮೃತಪಟ್ಟಿದ್ದು, ಹಕ್ಕಿ ಜ್ವರದ ಭೀತಿ ಎದುರಾಗಿದೆ.

ಮಯೂರ ವಿಹಾರ್ 3ನೇ ಹಂತದಲ್ಲಿ ಕಾಗೆಗಳು ಮೃತಪಟ್ಟಿವೆ. ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮಾದರಿ ಸಂಗ್ರಹಿಸಿದ್ದು, ಹೆಚ್ಚಿನ ಪರೀಕ್ಷೆಗಾಗಿ ಜಲಂಧರ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಆಳ–ಅಗಲ | ಹಕ್ಕಿಜ್ವರ: ಭೀತಿ ಬೇಡ, ಎಚ್ಚರ ಇರಲಿ

‘ಮಯೂರ ವಿಹಾರ್ ಪ್ರದೇಶದಲ್ಲಿ 20 ಕಾಗೆಗಳು ಮೃತಪಟ್ಟಿವೆ. ನಾವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಾಗಗೆಳ ಸಾವಿಗೆ ಹಕ್ಕಿ ಜ್ವರ ಕಾರಣವೇ ಎಂಬುದು ಇನ್ನಷ್ಟೇ ದೃಢಪಡಬೇಕಿದೆ’ ಎಂದು ಇಲಾಖೆಯ ಅಧಿಕಾರಿ ಡಾ. ರಾಕೇಶ್ ಸಿಂಗ್ ಹೇಳಿದ್ದಾರೆ.

ದೇಶದ ಹಲವೆಡೆ ಹಕ್ಕಿ ಜ್ವರ ಕಂಡುಬಂದಿರುವ ಕಾರಣ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರವು ಈಗಾಗಲೇ ಸೂಚಿಸಿದೆ. ಕೇರಳ, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಹರಡಿದೆ. ಹರಿಯಾಣದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ಇದನ್ನೂ ಓದಿ: ಹಕ್ಕಿ ಜ್ವರದ ಭೀತಿ: ‘ಮಾಂಸ, ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನಿ’

ದೆಹಲಿಯಲ್ಲಿ ಈವರೆಗೆ ಹಕ್ಕಿ ಜ್ವರ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಹೇಳಿದ್ದರು. ನೆರೆ ರಾಜ್ಯಗಳಿಂದ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು