ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ಸೂಚಿಸಿದ್ದ ಶೇಕಡ 97ರಷ್ಟು ಖಾತೆ ನಿರ್ಬಂಧಿಸಿದ ಟ್ವಿಟರ್‌

Last Updated 12 ಫೆಬ್ರುವರಿ 2021, 13:23 IST
ಅಕ್ಷರ ಗಾತ್ರ

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಸುಳ್ಳು ಮಾಹಿತಿ ನೀಡಿವೆ ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೂಚಿಸಿದ್ದ ಶೇ 97ರಷ್ಟು ಟ್ವಿಟರ್‌ ಖಾತೆ ಮತ್ತು ಪೋಸ್ಟ್‌ಗಳನ್ನು ಟ್ವಿಟರ್‌ ಸ್ಥಗಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಟ್ವಿಟರ್‌ ಪ್ರತಿನಿಧಿಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ನಡುವೆ ಬುಧವಾರ ಸಭೆ ನಡೆದಿತ್ತು. ಈ ವೇಳೆ, ಈ ನೆಲದ ಕಾನೂನಿಗೆ ಟ್ವಿಟರ್‌ ಬದ್ಧವಾಗಿರುವುದು ಕಡ್ಡಾಯ. ಇಲ್ಲದಿದ್ದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಚಿವಾಲಯ ಎಚ್ಚರಿಕೆ ನೀಡಿದೆ.

ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಉಂಟುಮಾಡುವ ಪ್ರಚೋದನಕಾರಿ ವಿಷಯವನ್ನು ನಿರ್ಬಂಧಿಸಲು ಟ್ವಿಟರ್‌ ಏಕೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಪ್ರಶ್ನಿಸಿರುವ ಸಚಿವಾಲಯ, ಇದೇ ರೀತಿಯ ಘಟನೆ ಅಮೆರಿಕದ ಕ್ಯಾಪಿಟಲ್ ಹಿಲ್‌ನಲ್ಲಿ ನಡೆದಾಗ ಕಂಪನಿಯ ಧೋರಣೆಯೇ ಭಿನ್ನವಾಗಿತ್ತು ಎಂದು ತಿಳಿಸಿದೆ.

ಈ ಸಂಬಂಧ ಟ್ವಿಟರ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT