ಗುರುವಾರ , ಆಗಸ್ಟ್ 18, 2022
24 °C

ಕೋವಿಡ್‌ ಟೂಲ್‌ಕಿಟ್‌ ಪ್ರಕರಣ: ಟ್ವಿಟರ್‌ ಎಂಡಿಯನ್ನು ಪ್ರಶ್ನಿಸಿದ ದೆಹಲಿ ಪೊಲೀಸರು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಕೋವಿಡ್‌ ಟೂಲ್‌ಕಿಟ್‌‘ ಪ್ರಕರಣದ ತನಿಖೆಯ ಭಾಗವಾಗಿ ಕಳೆದ ತಿಂಗಳು ಟ್ವಿಟರ್ ಇಂಡಿಯಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮನಿಷ್‌ ಮಹೇಶ್ವರಿ ಅವರನ್ನು ದೆಹಲಿ ಪೊಲೀಸರು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಪೊಲೀಸರು ಹೆಚ್ಚಿನ ವಿವರವನ್ನು ಬಹಿರಂಗಪಡಿಸಿಲ್ಲ. ಆದರೆ, ಬಳಕೆದಾರರು ಟ್ವಿಟ್‌ಗಳನ್ನು ‘ಮ್ಯಾನಿಪ್ಯುಲೇಟೆಡ್‌ ಮೀಡಿಯಾ' ಅಂದರೆ ತಿರುಚುವುದಕ್ಕೆ ಸಂಬಂಧಿಸಿ, ಕಂಪನಿಯ ನೀತಿಯ ಬಗ್ಗೆಯೂ ಅವರನ್ನು ಪ್ರಶ್ನಿಸಲಾಗಿದೆ ಎಂದು ಹೇಳಿದರು.

‘ಕೋವಿಡ್‌–19 ಸಾಂಕ್ರಾಮಿಕ ರೋಗ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಕಳಂಕ ತರಲು ಕಾಂಗ್ರೆಸ್‌ ಈ ಟೂಲ್‌ಕಿಟ್‌ ತಯಾರಿಸಿದೆ' ಎಂದು ಬಿಜೆಪಿಯ ಸಂಬಿತ್‌ ಪಾತ್ರ ಟ್ವೀಟ್‌ ಮಾಡಿದ್ದರು. ಪಾತ್ರ ಟ್ವೀಟ್‌ ಬಗ್ಗೆ ಪ್ರತಿಕ್ರಿಯಿಸಿದ್ದ ಟ್ವೀಟರ್‌, ‘ಪಾತ್ರ ಅವರು ತಿರುಚಿರುವ ಹಾಗೂ ಖಚಿತ ದಾಖಲೆಗಳಿಲ್ಲದ ಟೂಲ್ ಕಿಟ್ ಹಂಚಿಕೊಂಡಿದ್ದಾರೆ' ಎಂದು ಹೇಳಿತ್ತು. ಈ ಬೆಳವಣಿಗೆಗಳ ನಂತರ, ಪೊಲೀಸರು ಟ್ವಿಟರ್‌ ಎಂಡಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ವಿಶೇಷ ತಂಡವನ್ನು ಮೇ 31 ರಂದು ಬೆಂಗಳೂರಿಗೆ ಕಳುಹಿಸಲಾಗಿದ್ದು, ಅಲ್ಲಿ ಮಹೇಶ್ವರಿಯನ್ನು ಪ್ರಶ್ನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇವುಗಳನ್ನೂ ಓದಿ...

ಗಾಜಿಯಾಬಾದ್‌ ಹಲ್ಲೆ ಪ್ರಕರಣ: ನಟಿ, ಟ್ವಿಟರ್ ಎಂಡಿ ವಿರುದ್ಧ ಪೊಲೀಸರಿಗೆ ದೂರು

‘ಕೋಮು ದ್ವೇಷಕ್ಕೆ ಕುಮ್ಮಕ್ಕು’ ನೀಡಿದ ಆರೋಪ: ಟ್ವಿಟರ್‌ ವಿರುದ್ಧ ಪ್ರಕರಣ

ಕೋಮು ಸಂಘರ್ಷ ಸುದ್ದಿ ಬಿತ್ತರ ಆರೋಪ: ಟ್ವಿಟರ್‌, ಪತ್ರಕರ್ತರ ವಿರುದ್ಧ ಎಫ್‌ಐಆರ್‌

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು