ಗುರುವಾರ , ಜನವರಿ 21, 2021
30 °C

ಚಿನ್ನ ಕಳ್ಳ ಸಾಗಣೆ: ಇಬ್ಬರು ಏರ್‌ ಇಂಡಿಯಾ ಸಿಬ್ಬಂದಿ ಸೇರಿ ಮೂವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಚಿನ್ನ ಕಳ್ಳ ಸಾಗಣೆ-ಸಾಂದರ್ಭಿಕ ಚಿತ್ರ

ನವದೆಹಲಿ: ಸುಮಾರು ₹72.5 ಲಕ್ಷ ಮೌಲ್ಯದ ಚಿನ್ನ ಕಳ್ಳ ಸಾಗಣೆ ಪ್ರಕರಣದಡಿ ಬಂಧಿಸಲಾದ ಮೂವರು ಆರೋಪಿಗಳಲ್ಲಿ ಇಬ್ಬರು ಏರ್‌ ಇಂಡಿಯಾ ಎಸ್‌ಎಟಿಎಸ್‌ ಸಿಬ್ಬಂದಿ ಇದ್ದಾರೆ ಎಂದು ಕಸ್ಟಮ್ಸ್‌ ಪ್ರಕಟಣೆ ತಿಳಿಸಿದೆ.

ಸೋಮವಾರ ಅಬುಧಾಬಿಯಿಂದ ಬಂದ ಪ್ರಯಣಿಕರೊಬ್ಬರನ್ನು ಕಸ್ಟಮ್‌ ಅಧಿಕಾರಿಗಳು ತಡೆದು ವಿಚಾರಣೆ ನಡೆಸಿದ್ದರು.

‘ಆತ ತಾನು ಅಬುಧಾಬಿಯಿಂದ ಬರುವಾಗ ಬೆಳ್ಳಿ ಬಣ್ಣದ ಪ್ಯಾಕೆಟ್‌ನಲ್ಲಿ 1.48 ಕೆ.ಜಿ ಚಿನ್ನವನ್ನು ತಂದಿದ್ದೆ. ಅದನ್ನು ತಾನು ಬಂದ ವಿಮಾನದ ಶೌಚಾಲಯದಲ್ಲಿ ಅಡಗಿಸಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ' ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಏರ್‌ ಇಂಡಿಯಾದ ಎಸ್‌ಎಟಿಎಸ್‌ ಸಿಬ್ಬಂದಿಯೊಬ್ಬ, ಇನ್ನೊಬ್ಬ ಸಿಬ್ಬಂದಿಗೆ ಚಿನ್ನವನ್ನು ನೀಡುತ್ತಿರುವಾಗ ಕಸ್ಟಮ್‌ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. ಈ ಮೂವರು ಆರೋಪಿಗಳನ್ನು ಚಿನ್ನ ಕಳ್ಳ ಸಾಗಣೆ ಪ್ರಕರಣದಡಿ ಬಂಧಿಸಲಾಗಿದ್ದು, ₹72.5 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿಚಾರಣೆ ವೇಳೆ ಈ ಹಿಂದೆಯೂ ₹2.17 ಕೋಟಿ ಮೌಲ್ಯದ ಚಿನ್ನ ಕಳ್ಳ ಸಾಗಣೆ ಮಾಡಿರುವುದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು