ಶನಿವಾರ, ಆಗಸ್ಟ್ 20, 2022
22 °C

ವಾಯವ್ಯ ದೆಹಲಿಯಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಬಂಧನ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Bhupender alias Dilawar Singh and Kulwant Singh

ನವದೆಹಲಿ: ವಾಯವ್ಯ ದೆಹಲಿಯಲ್ಲಿ ಸೋಮವಾರ ಗುಂಡಿನ ಚಕಮಕಿ ನಡೆದಿದ್ದು, ‘ಬಬ್ಬರ್ ಖಸ್ಲಾ ಇಂಟರ್‌ನ್ಯಾಷನಲ್ (ಬಿಕೆಐ)’ ಉಗ್ರ ಸಂಘಟನೆಗೆ ಸೇರಿದ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ದಳ ತಿಳಿಸಿದೆ. ಬಂಧಿತರು ಪಂಜಾಬ್‌ನಲ್ಲಿನ ಕೆಲವು ಪ್ರಕರಣಗಳಲ್ಲಿಯೂ ಪೊಲೀಸರಿಗೆ ಬೇಕಾಗಿದ್ದರು.

ಬಂಧಿತರನ್ನು ಭೂಪೇಂದರ್ ಅಲಿಯಾಸ್ ದಿಲ್ವಾರ್ ಸಿಂಗ್ ಮತ್ತು ಕುಲ್ವಂತ್ ಸಿಂಗ್ ಎಂದು ಗುರುತಿಸಲಾಗಿದೆ. ಇವರಿಂದ ಆರು ಪಿಸ್ತೂಲ್‌ಗಳು ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ವಶ‍ಡಿಸಿಕೊಳ್ಳಲಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು