ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನುವಾರು ಕಳ್ಳಸಾಗಣೆಗೆ ಯತ್ನ: ಬಿಎಸ್‌ಎಫ್‌ನಿಂದ ಇಬ್ಬರು ಬಾಂಗ್ಲಾದೇಶಿಯರ ಹತ್ಯೆ

Last Updated 12 ನವೆಂಬರ್ 2021, 6:42 IST
ಅಕ್ಷರ ಗಾತ್ರ

ನವದೆಹಲಿ:ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್‌ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ.

ಗುಂಡಿನ ದಾಳಿ ವೇಳೆ ಭದ್ರತಾ ಪಡೆ ಯೋಧರೊಬ್ಬರಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌)ನ ವಕ್ತಾರರು ತಿಳಿಸಿದ್ದಾರೆ.

‘ಕಿಡಿಗೇಡಿಗಳು ಭಾರತದ ಗಡಿದಾಟಿ ಜಾನುವಾರುಗಳ ಕಳ್ಳಸಾಗಣೆಗೆ ನಸುಕಿನ 3 ಗಂಟೆಗೆ ಯತ್ನಿಸಿದ್ದರು. ವಾಪಸು ಮರಳುವಂತೆ ಸೂಚಿಸಿದರು. ಅದಕ್ಕೆ ಸ್ಪಂದಿಸಲಿಲ್ಲ. ಬದಲಿಗೆ ಕಬ್ಬಿಣದ ಸರಳು ಬಳಸಿ ಹಲ್ಲೆಗೆ ಮುಂದಾಗಿದ್ದರು. ಆತ ಆತ್ಮರಕ್ಷಣೆ ಕ್ರಮವಾಗಿ ಭದ್ರತಾ ಪಡೆ ಸಿಬ್ಬಂದಿಯು ಗುಂಡಿನ ದಾಳಿ ನಡೆಸಿದರು’ ಎಂದು ವಕ್ತಾರರು ವಿವರಿಸಿದ್ದಾರೆ.

‘ನಂತರದಲ್ಲಿ ಸಿಬ್ಬಂದಿ ಅಂತರರಾಷ್ಟ್ರೀಯ ಗಡಿಗೆ ಅನುಗುಣವಾಗಿ ಹಾಕಿದ್ದ ಬೇಲಿಯ ಬಳಿ ಪರಿಶೀಲನೆ ನಡೆಸಿದಾಗ ಇಬ್ಬರು ಅಪರಿಚಿತ ಕಿಡಿಗೇಡಿಗಳ ಶವ ಪತ್ತೆಯಾಯಿತು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT