ಗುರುವಾರ , ಏಪ್ರಿಲ್ 15, 2021
30 °C

ಕರ್ನಾಟಕದ ಇಬ್ಬರಿಗೆ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’, ಸಿಎಂ ಶ್ಲಾಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಲೆ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 32 ಮಕ್ಕಳನ್ನು ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆ.ರಾಕೇಶಕೃಷ್ಣ (15) ಹಾಗೂ ಬೆಂಗಳೂರಿನ ವೀರಕಶ್ಯಪ್‌ (10) ಈ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಬಾಲಕರು.

ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜ.25) ಸಂವಾದ ನಡೆಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, 'ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ' ಎಂದು ಹೇಳಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು