ಶುಕ್ರವಾರ, ಮಾರ್ಚ್ 31, 2023
26 °C

ಡಿಜಿಸಿಎ, ವಿಮಾನಯಾನ ಸಚಿವಾಲಯದ ತಲಾ ಇಬ್ಬರು ಕೋವಿಡ್‌ನಿಂದ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯದ ಇಬ್ಬರು ಸಲಹೆಗಾರರು ಮತ್ತು ವಾಯುಯಾನ ನಿಯಂತ್ರಕ ಡಿಜಿಸಿಎಯ ಇಬ್ಬರು ಅಧಿಕಾರಿಗಳು ಕೋವಿಡ್-19ನಿಂದ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸರ್ಕಾರಿ ಸೇವೆಯಿಂದ ನಿವೃತ್ತರಾಗಿ ಸದ್ಯ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಲಹೆಗಾರರು 2020ರ ಕೋವಿಡ್-19 ಮೊದಲನೇ ಅಲೆಯ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ)ನ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕರಿಬ್ಬರು 2021ರ ಕೋವಿಡ್-19 ಎರಡನೇ ಅಲೆಯ ವೇಳೆ ಮೃತಪಟ್ಟಿದ್ದಾರೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯು ಭಾರತಕ್ಕೆ ತೀವ್ರ ಹಾನಿಯನ್ನುಂಟುಮಾಡಿದೆ. ಈ ವರ್ಷದ ಜನವರಿ ಮತ್ತು ಮೇನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಒಟ್ಟು 44 ಉದ್ಯೋಗಿಗಳು ಕೋವಿಡ್ ಸೋಂಕಿತರಾಗಿದ್ದರು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 

2021ಕ್ಕೆ ಹೋಲಿಸಿದರೆ 2020ರಲ್ಲಿ ಸಚಿವಾಲಯದ ಕೇವಲ 26 ನೌಕರರು ಮಾತ್ರ ಕೋವಿಡ್-19 ಪಾಸಿಟಿವ್ ಆಗಿದ್ದರು. ಸೋಂಕು ತಗುಲಿದ್ದ ಎಲ್ಲ ನೌಕರರ ವೈದ್ಯಕೀಯ ವೆಚ್ಚವನ್ನು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಎಚ್‌ಎಸ್) ಮತ್ತು ಕೇಂದ್ರ ಸೇವಾ (ವೈದ್ಯಕೀಯ ಹಾಜರಾತಿ) ನಿಯಮಗಳ ಪ್ರಕಾರ ಮರುಪಾವತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಆರೋಗ್ಯ ಸಚಿವಾಲಯದ ಪ್ರಕಾರ, ಭಾನುವಾರ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,08,37,222ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು 4,54,118ರಷ್ಟಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು