ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು ಪೊಲೀಸರು ಸೇರಿ ನಾಲ್ವರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ಶನಿವಾರ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಮೃತಪಟ್ಟಿದ್ಧಾರೆ. ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸೊಪೋರದ ಮೇನ್‌ಚೌಕ್ ಬಳಿ ಉಗ್ರರು ಸಿಆರ್‌ಪಿಎಫ್ ಮತ್ತು ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಪೊಲೀಸರು ಮತ್ತು ಇಬ್ಬರು ನಾಗರಿಕರು ಹತರಾಗಿದ್ದಾರೆ. ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
‘ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.