ಮಹಿಳಾ ಸಿಬ್ಬಂದಿಯ ಜೊತೆಗೆ ಅಸಭ್ಯ ವರ್ತನೆ; ಡಿಎಂಕೆಯ ಇಬ್ಬರು ಕಾರ್ಯಕರ್ತರ ಬಂಧನ

ಚೆನ್ನೈ: ತಮಿಳುನಾಡಿನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಡಿಎಂಕೆ ಪಕ್ಷದ ಇಬ್ಬರು ಕಾರ್ಯಕರ್ತರನ್ನು ಬುಧವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಪರೀಶಿಲಿಸಿದ ಬಳಿಕ ಡಿಎಂಕೆ ಯೂತ್ ವಿಂಗ್‌ನ ಇಬ್ಬರು ಪದಾಧಿಕಾರಿಗಳನ್ನು ಬಂಧಿಸಲಾಗಿದೆ ಪೊಲೀಸ್ ಮೂಲಗಳು ತಿಳಿಸಿವೆ.
ಪಕ್ಷದ ವರ್ಚಸ್ಸಿಗೆ ಕುಂದು ತಂದಿರುವ ಈ ಇಬ್ಬರನ್ನು ಮಂಗಳವಾರ ತಡರಾತ್ರಿ ಡಿಎಂಕೆ ಪಕ್ಷದಿಂದ ವಜಾಗೊಳಿಸಿದೆ.
ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿ ಶ್ಲಾಘಿಸಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ
ಪಕ್ಷಕ್ಕೆ ಅಪಖ್ಯಾತಿ ತಂದಿರುವ ಮತ್ತು ಪಕ್ಷ ವಿರೋಧಿ ಚುಟುವಟಿಕೆ ನಡೆಸಿರುವ ಪ್ರವೀಣ್ ಮತ್ತು ಏಕಾಂಬರಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಡಿಎಂಕೆ ಪ್ರಧಾನ ಕಾರ್ಯದರ್ಶಿ ದುರೈ ಮುರುಗನ್ ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಡಿಸೆಂಬರ್ 31ರಂದು ಸಾರ್ವಜನಿಕ ಸಭೆಯಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿರೋಧ ಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿಯಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.