ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನವಮಿ, ಮಾಂಸಾಹಾರದ ವಿಚಾರವಾಗಿ ಜೆಎನ್‌ಯುನಲ್ಲಿ ಗುಂಪು ಘರ್ಷಣೆ

Last Updated 11 ಏಪ್ರಿಲ್ 2022, 1:40 IST
ಅಕ್ಷರ ಗಾತ್ರ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕಾವೇರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಎಬಿವಿಪಿ ಸದಸ್ಯರು ಹಾಸ್ಟೆಲ್‌ನಲ್ಲಿ ಮಾಂಸಾಹಾರ ಸೇವಿಸದಂತೆ ವಿದ್ಯಾರ್ಥಿಗಳನ್ನು ತಡೆದು ಹಿಂಸಾತ್ಮಕ ವಾತಾ ವರಣ ಸೃಷ್ಟಿಸಿದ್ದಾರೆ ಎಂದು ವಿ.ವಿ.ಯವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಆರೋಪಿಸಿದೆ. ಆದರೆ ಎಬಿವಿಪಿ ಈ ಆರೋಪವನ್ನು ನಿರಾಕರಿಸಿದೆ. ರಾಮನವಮಿ ನಿಮಿತ್ತ ಹಾಸ್ಟೆಲ್‌ನಲ್ಲಿ ಏರ್ಪಡಿಸಿದ್ದ ಪೂಜೆಗೆ ಎಡ ಪಂಥೀಯರು ಅಡ್ಡಿಪಡಿಸಿದ್ದಾರೆ ಎಂದು ಆಪಾದಿಸಿದೆ.

‘ಎರಡೂ ಗುಂಪಿನವರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ’ ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ. ತಿಳಿಸಿದ್ದಾರೆ.

‘ಪರಿಸ್ಥಿತಿ ಹತೋಟಿಯಲ್ಲಿದ್ದು, ವಿದ್ಯಾರ್ಥಿಗಳ ಪ್ರತಿಭಟನೆ ಸಹ ಅಂತ್ಯಗೊಂಡಿದೆ. ವಿಶ್ವವಿದ್ಯಾಲಯದ ಮನವಿ ಮೇರೆಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಶಾಂತಿ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT