ಗುರುವಾರ , ಜನವರಿ 27, 2022
21 °C

ಪೆರಿಯಾರ್‌ ಪ್ರತಿಮೆ ವಿರೂಪ: ಇಬ್ಬರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಯಮತ್ತೂರು: ಸಮಾಜ ಸುಧಾರಕ ಪೆರಿಯಾರ್‌ ಇ.ವಿ. ರಾಮಸ್ವಾಮಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ಆರೋಪದಲ್ಲಿ ಇಲ್ಲಿನ ಹಿಂದೂ ಮುನ್ನಣಿ ಸಂಘಟನೆಯ ಇಬ್ಬರು ಪದಾಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅರುಣ್‌ ಕಾರ್ತಿಕ್‌ ಮತ್ತು ಮೋಹನ್‌ ರಾಜ್‌ ಬಂಧಿತ ಆರೋಪಿಗಳು. ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಪರಿಶೀಲಿಸಿ ಆರೋಪಿಗಳನ್ನು ಗುರುತಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವೆಲ್ಲೂರಿನ ಪೆರಿಯಾರ್‌ ಅಧ್ಯಯನ ಕೇಂದ್ರದ ಮುಂಭಾಗದಲ್ಲಿ ಸ್ಥಾಪಿಸಿದ್ದ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ, ಕೇಸರಿ ಬಣ್ಣದ ಪುಡಿ ಹಚ್ಚಿರುವುದು ಭಾನುವಾರ ಬೆಳಿಗ್ಗೆ ಕಂಡುಬಂದಿದ್ದು, ಇದನ್ನು ಖಂಡಿಸಿ ದ್ರಾವಿಡ ಕಳಗಂ ಮೊದಲಾದ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು