ನವದೆಹಲಿ: ಇಲ್ಲಿನ ವಿಶ್ವಾಸ ನಗರ ಕ್ಷೇತ್ರದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅವರ ಕಚೇರಿಗೆ ಬೀಗ ಒಡೆದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಫೆ. 10ರಂದು ಕರ್ಕರ್ದೂಮಾ ಕೋರ್ಟ್ ಟ್ರಾಫಿಕ್ ಸಿಗ್ನಲ್ ಬಳಿಯ ಶರ್ಮಾ ಅವರ ಕಚೇರಿಯಲ್ಲಿ ಕಳ್ಳತನ ಆಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಫೆ.9 ರಂದು ನಿರಂಜನ್ ಅವರು ಮಧ್ಯಾಹ್ನ 3 ಗಂಟೆಗೆ ಕಚೇರಿ ಬಾಗಿಲು ಹಾಕಿಕೊಂಡು ಹೋಗಿದ್ದರು. ಮರುದಿನ ಬೆಳಿಗ್ಗೆ ಕಚೇರಿ ಬಾಗಿಲು ತೆರೆದು ನೋಡಿದಾಗ, ಕಿಟಕಿ ಬಾಗಿಲು ಒಡೆದಿರುವುದು ಹಾಗೂ ಕೆಲ ವಸ್ತುಗಳು ಕಳ್ಳತನವಾಗಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಚೇರಿ ಸುತ್ತಮುತ್ತಲ ಪ್ರದೇಶದ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ವೇಳೆ ಇಬ್ಬರು ವ್ಯಕ್ತಿಗಳು ಓಡಾಡುವುದು ಕಂಡು ಬಂದಿದೆ. ಆರೋಪಿಗಳನ್ನು ಬಂಧಿಸಿ ಎರಡು ಟಿ.ವಿ, ಐದು ನೀರಿನ ನಲ್ಲಿಗಳು, ನೀರಿನ ಮೋಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ರೋಹಿತ್ ಮೀನಾ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.