ಸಿಂಘು ಗಡಿಯಲ್ಲಿ ಕರ್ತವ್ಯ ನಿರತ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೋವಿಡ್ ಸೋಂಕು

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಹಾಗೂ ಹರಿಯಾಣ ಗಡಿ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಈ ಮಧ್ಯೆ ಸಿಂಘು ಗಡಿ ಪ್ರದೇಶದಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಗೊಂಡಿದೆ. ಇದರಿಂದ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿರಬಹುದೇ ಎಂಬುದು ಆತಂಕ ಸೃಷ್ಟಿಯಾಗಿದೆ.
ದೆಹಲಿ ಪೊಲೀಸ್ ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇವರನ್ನು ಹೋಮ್ ಕ್ವಾರಂಟೈನ್ಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ರೈತರು ನರೇಂದ್ರ ತೋಮರ್, ಪೀಯೂಷ್ ಗೋಯಲ್ ಮಾತುಗಳನ್ನು ಕೇಳಿ: ಪ್ರಧಾನಿ ಮೋದಿ ಮನವಿ
ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 16ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ, ದೇಶದಾದ್ಯಂತ ರೈಲು ಸಂಚಾರಕ್ಕೆ ಅಡ್ಡಿ ಮಾಡುವುದಾಗಿ ಘೋಷಿಸಿದ್ದಾರೆ.
ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ರೈತ ಮುಖಂಡರು ಯೋಜನೆಯಿರಿಸಿದ್ದಾರೆ. ದೆಹಲಿ, ಹರಿಯಾಣಕ್ಕಷ್ಟೇ ಸೀಮಿತಗೊಳ್ಳದೆ ದೇಶವ್ಯಾಪಿ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಪ್ರತಿಭಟನೆ 16ನೇ ದಿನಕ್ಕೆ: ಪರಿಹಾರ ದೇವರಿಗೆ ಗೊತ್ತು –ರೈತ ಮುಖಂಡ
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.