ಸಿತಾರ್ಗಂಜ್(ಉತ್ತರಾಖಂಡ): ಶಾಲಾ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಇಬ್ಬರು ಮೃತಪಟ್ಟು 30 ಮಂದಿ ಗಾಯಗೊಂಡರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಶಾಲಾ ಮಕ್ಕಳು ಮತ್ತು ಸಿಬ್ಬಂದಿಯನ್ನು ಪಿಕ್ನಿಕ್ನಿಂದ ವಾಪಸ್ ಕರೆತರುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 74ರ ಸಿಸೈಯಾನ್ ಬಳಿ ಸೋಮವಾರ ಸಂಜೆ ಈ ಅಪಘಾತ ಸಂಭವಿಸಿದೆ ಎಂದು ಸಿತಾರ್ಗಂಜ್ನ ಉಪವಿಭಾಗಾಧಿಕಾರಿ ತುಷಾರ್ ಸೈನಿ ಹೇಳಿದ್ದಾರೆ.

14 ವರ್ಷದ ವಿದ್ಯಾರ್ಥಿನಿ ಮತ್ತು 35 ವರ್ಷದ ಶಿಕ್ಷಕರು ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಯಗೊಂಡಿರುವ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 22 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉನ್ನತ ಆಸ್ಪತ್ರೆಗಳಿಗೆ ಕಳುಹಿಸಲು ಸೂಚಿಸಲಾಗಿದೆ ಎಂದು ಸೈನಿ ಹೇಳಿದ್ದಾರೆ. ಅಪಘಾತದ ಸಂದರ್ಭ ಬಸ್ನಲ್ಲಿ 51 ಮಂದಿ ಇದ್ದರು.

ಘಟನೆ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.