ಶುಕ್ರವಾರ, ಮಾರ್ಚ್ 31, 2023
22 °C

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಉಗ್ರರ ದಾಳಿ; ಇಬ್ಬರು ನಾಗರಿಕರು ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಬಳಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ನಾಗರಿಕರಿಬ್ಬರು ಮೃತಪಟ್ಟಿದ್ದಾರೆ.

ಪೊಲೀಸರು, ರಕ್ಷಣಾ ಸಿಬ್ಬಂದಿ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಬಳಿ ಉಗ್ರರು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಪೊಲೀಸರು, ರಕ್ಷಣಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ' ಎಂದು ಸೇನಾ ಘಟಕ 'ವೈಟ್‌ ನೈಟ್‌ ಕಾಪ್ಸ್‌' ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

ಈ ಹಿಂದೆ ಶಿಬಿರದ ಕಾವಲು ಸಿಬ್ಬಂದಿ ಅಚಾನಕ್ಕಾಗಿ ಗುಂಡು ಹಾರಿಸಿದ್ದಾರೆ ಎಂದು ಸೇನೆ ಹೇಳಿತ್ತು. ಬಳಿಕ, ಇದು ಭಯೋತ್ಪಾದಕರ ಕೃತ್ಯ ಎಂದು ಅದು ಹೇಳಿದೆ. ನಾಗರಿಕರ ಹತ್ಯೆ ಖಂಡಿಸಿ ಸ್ಥಳಿಯರು ಪ್ರತಿಭಟನೆ ನಡೆಸಿದ್ದು, ಸೇನಾ ಶಿಬಿರದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು