ಮಂಗಳವಾರ, ಅಕ್ಟೋಬರ್ 4, 2022
26 °C

ಕೇರಳ: ಪ್ರವಾಹದಲ್ಲಿ ಸಿಲುಕಿ ಇಬ್ಬರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಇಲ್ಲಿಗೆ ಸಮೀಪದ ಪಾಲೋಡ್‌ನಲ್ಲಿರುವ ಮಂಕಯಂ ಜಲಪಾತದಲ್ಲಿ ಸಂಭವಿಸಿದ ಹಠಾತ್‌ ಪ್ರವಾಹದಲ್ಲಿ ಸಿಲುಕಿ ಎಂಟು ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

‘ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹತ್ತು ಜನರು ಇಲ್ಲಿಗೆ ಬಂದಿದ್ದರು. ಈ ವೇಳೆ ಬ್ರಿಮುರ್‌ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಲು ಪ್ರಯತ್ನಿಸಿದ್ದರು. ಆದರೆ ಇಲ್ಲಿ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ. ಹೀಗಾಗಿ ಭಾನುವಾರ ಸಂಜೆ ಜಲಪಾತ ಸ್ಥಳಕ್ಕೆ ಭೇಟಿ ನೀಡಿದ್ದರು. ಆದರೆ ದುರದೃಷ್ಟವಶಾತ್‌ ಅದೇ ಸಮಯದಲ್ಲಿ ಹಠಾತ್‌ ಪ್ರವಾಹ ಉಂಟಾಗಿ ದುರಂತ ಸಂಭವಿಸಿದೆ. ಹತ್ತು ಮಂದಿ ಪೈಕಿ ಉಳಿದ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಮಂಗಳವಾರ ರೆಡ್‌ ಅಲರ್ಟ್‌ ಘೋಷಿಸಿದೆ. ಆಲಪ್ಪುಳ, ಕೋಟಯಂ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು