ಬುಧವಾರ, ಅಕ್ಟೋಬರ್ 28, 2020
28 °C

ಎನ್‌ಕೌಂಟರ್‌: ಕಮಾಂಡರ್‌ ಸೇರಿ ಇಬ್ಬರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಇಲ್ಲಿನ ಹಳೆಯ ಬರ್ಜುಲ್ಲಾ ಪ್ರದೇಶದಲ್ಲಿ ಭದ್ರತಾಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್‌ ಎ ತಯಬಾ(ಎಲ್‌ಇಟಿ) ಸಂಘಟನೆಯ ಪಾಕಿಸ್ತಾನದ ಕಮಾಂಡರ್‌ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದಾರೆ.

‘ಉಗ್ರರು ಅವಿತಿರುವ ಮಾಹಿತಿಯ ಮೇರೆಗೆ ಭದ್ರತಾಪಡೆ ಯೋಧರು ಸೋಮವಾರ ಬೆಳಿಗ್ಗೆ ಶೋಧ ಕಾರ್ಯ ನಡೆಸುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ಪ್ರತಿದಾಳಿ ನಡೆಸಿ ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಉಗ್ರ ಸಂಘಟನೆಯ ಪಾಕಿಸ್ತಾನ ಕಮಾಂಡರ್‌ ಸೈಫುಲ್ಲಾ ಹತ್ಯೆಗೀಡಾಗಿದ್ದು, ಈತ ನೌಗಾಮ್‌, ಚದೂರಾ ಮತ್ತು ಕಂಡಿಜಾಲ್‌ ಪ್ರದೇಶಗಳಲ್ಲಿ ಭದ್ರತಾಪಡೆಗಳ ಮೇಲೆ ಈಚೆಗೆ ನಡೆದಿದ್ದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ’ ಎಂದು ಜಮ್ಮು–ಕಾಶ್ಮೀರದ ಪೊಲೀಸ್‌ ಮಹಾನಿರ್ದೇಶಕ ದಿಲ್‌ಬಾಗ್‌ ಸಿಂಗ್‌ ಹೇಳಿದ್ದಾರೆ.

‘ಶ್ರೀನಗರದಲ್ಲಿ ಈ ವರ್ಷ ಇದುವರೆಗೆ ಎಂಟು ಎನ್‌ಕೌಂಟರ್‌ಗಳು ನಡೆದಿದ್ದು, 18 ಉಗ್ರರು ಸಾವಿಗೀಡಾಗಿದ್ದಾರೆ‘ ಎಂದೂ ಅವರು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು