ಶನಿವಾರ, ಜುಲೈ 24, 2021
23 °C
ದರ್ಭಂಗಾ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣ

ಹೈದರಾಬಾದ್‌ನಲ್ಲಿ ಇಬ್ಬರು ಎಲ್‌ಇಟಿ ಉಗ್ರರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಹಾರದ ದರ್ಭಂಗಾ ರೈಲು ನಿಲ್ದಾಣದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿ ಇಬ್ಬರು ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕರನ್ನು ಬುಧವಾರ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಕ್ತಾರರು ತಿಳಿಸಿದ್ದಾರೆ.

ಇಮ್ರಾನ್ ಮಲಿಕ್ ಅಲಿಯಾಸ್ ಇಮ್ರಾನ್ ಖಾನ್ ಮತ್ತು ಆತನ ಸಹೋದರ ಮೊಹಮ್ಮದ್ ನಾಸಿರ್ ಖಾನ್ ಬಂಧಿತರು. ಈ ಇಬ್ಬರು ಹೈದರಾಬಾದ್‌ನಲ್ಲಿ ವಾಸವಿದ್ದರು. ಮೂಲತಃ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯವರು. ದೇಶದಾದ್ಯಂತ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯ ಉನ್ನತ ಕಾರ್ಯಕರ್ತರು ನಡೆಸಿದ ಪಿತೂರಿಯಲ್ಲಿ ಈ ಇಬ್ಬರು ಭಾಗಿಯಾಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು