ಶುಕ್ರವಾರ, ಮಾರ್ಚ್ 31, 2023
25 °C
ಇಸ್ರೊ ಬೇಹುಗಾರಿಕೆ

ಮಾಜಿಪೊಲೀಸ್ ಅಧಿಕಾರಿಗಳ ನಿರೀಕ್ಷಣಾ ಜಾಮೀನು ವಿರುದ್ಧ ಮಾಲ್ಡೀವ್ಸ್ ಮಹಿಳೆಯರ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: 1994ರ ಇಸ್ರೊ ಬೇಹುಗಾರಿಕೆ ಪ್ರಕರಣದಲ್ಲಿ ವಿಜ್ಞಾನಿ ನಂಬಿ ನಾರಾಯಣನ್‌ ಅವರೊಂದಿಗೆ ಬಂಧನಕ್ಕೊಳಗಾಗಿದ್ದ ಮಾಲ್ಡೀವ್ಸ್‌ನ ಇಬ್ಬರು ಮಹಿಳೆಯರು, ಕೇರಳದ ಇಬ್ಬರು ಮಾಜಿ ಪೊಲೀಸ್‌ ಅಧಿಕಾರಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನಿನ ವಿರುದ್ಧ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಎಸ್‌.ವಿಜಯನ್ ಮತ್ತು ಥಂಪಿ ಎಸ್ ದುರ್ಗಾದತ್‌ ಜಂಟಿಯಾಗಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಸುಳ್ಳು ವಿವಾದಗಳನ್ನು ಸೇರಿಸಲಾಗಿದೆ. ಇದನ್ನು ಆಧರಿಸಿ ಜಾಮೀನು ನೀಡಿದರೆ, ಮಾಲ್ಡೀವ್ಸ್ ಪ್ರಜೆಗಳಿಗೆ ನ್ಯಾಯ ನಿರಾಕರಿಸಿದಂತಾಗುತ್ತದೆ ಎಂದು ಮಾಲ್ಡೀವ್ಸ್‌ನ ಪ್ರಜೆಗಳಾದ ಮರಿಯಮ್ ರಶೀದಾ ಮತ್ತು ಫೌಜಿಯಾ ಹಸನ್‌ ಅವರು ಆರೋಪಿಸಿದ್ದಾರೆ. 

ಬೇಹುಗಾರಿಕೆ ಪ್ರಕರಣದಲ್ಲಿ ನಂಬಿ ನಾರಾಯಣನ್ ಮತ್ತು ಇಬ್ಬರ ಬಂಧನಕ್ಕೆ ಸಂಬಂಧಿಸಿದಂತೆ, ಮಾಜಿ ಡಿಜಿಪಿ ಮ್ಯಾಥ್ಯೂ ಹಾಗೂ ಇತರ 17 ಜನರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇದರಲ್ಲಿ ಇಬ್ಬರು ಮಾಜಿ ಅಧಿಕಾರಿಗಳು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. 

ಜುಲೈ 19ರಂದು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ವಕೀಲ ಪ್ರಸಾದ್‌ ಗಾಂಧಿ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು