ಬುಧವಾರ, ಸೆಪ್ಟೆಂಬರ್ 22, 2021
26 °C

ಜಮ್ಮು: ಭಯೋತ್ಪಾದಕರಿಗೆ ಹಣಕಾಸಿನ ನೆರವು; ಇಬ್ಬರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ‘ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.

‘ಭದ್ರತಾ ಸಿಬ್ಬಂದಿಯು ನಿಖರ ಮಾಹಿತಿ ಮೇರೆಗೆ ಕಂಗಾ ಭ್ರೋತಿ ಗ್ರಾಮದ ಹಲವೆಡೆ ಶೋಧ ನಡೆಸಿದೆ. ಈ ವೇಳೆ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ ₹25.81 ಲಕ್ಷ ವಶಕ್ಕೆ ಪಡೆಯಲಾಗಿದೆ. ಇದು ಭಯೋತ್ಪಾದಕರಿಗೆ ನೀಡಲು ಸಂಗ್ರಹಿಸಿದ ಹಣ’ ಎಂದು ಅವರು ಹೇಳಿದರು.

‘ಬಂಧಿತರನ್ನು ಮೊಹಮ್ಮದ್‌ ಶಕೀಲ್‌ ಮತ್ತು ಮೊಹಮ್ಮದ್‌ ಅಲ್ಯಾಸ್‌ ಎಂದು ಗುರುತಿಸಲಾಗಿದೆ. ಈ ಸಂಬಂಧ ಮೆಂದಾರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈಗಾಗಲೇ ತನಿಖೆಯನ್ನು ಪ್ರಾರಂಭಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು