ನವದೆಹಲಿ: ಇಬ್ಬರು ವ್ಯಕ್ತಿಗಳು ತಮ್ಮ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆಯತಪ್ಪಿ(ಸ್ಕಿಡ್) ಕಾಲುವೆಗೆ ಬಿದ್ದಿರುವ ಘಟನೆ ದೆಹಲಿಯ ಆಗ್ನೀಯ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಮಧ್ಯರಾತ್ರಿಯ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಕಾಲುವೆಯಲ್ಲಿ ಬಿದ್ದಿರುವ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ದೆಹಲಿ-ಗುರುಗ್ರಾಮ್ ಕಾಲುವೆಯಲ್ಲಿ ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂತ್ರಸ್ತರನ್ನು ಮೊಲಾರ್‌ಬಂಡ್ ಎಕ್ಸ್‌ಟಿಎನ್‌ನ ನಿವಾಸಿಗಳಾದ ರಾಹುಲ್ (32) ಮತ್ತು ಹೇಮೇಂದ್ರ ಸಿಂಗ್ (30) ಎಂದು ಗುರುತಿಸಲಾಗಿದೆ.
ಇಲ್ಲಿನ ಬದರ್‌ಪುರದ ಅಟಲ್ ಪಾರ್ಕ್ ಎದುರು ದೆಹಲಿ-ಗುರುಗ್ರಾಮ್ ಕಾಲುವೆಯ ಬಳಿ ಬೈಕ್ ಅಪಘಾತದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಂದು ಪೊಲೀಸ್ ಉಪ ಆಯುಕ್ತ (ಆಗ್ನೇಯ) ರಾಜೇಶ್ ಡಿಯೋ ಹೇಳಿದ್ದಾರೆ.
ಅಪರಾಧ ತಂಡ, ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ತಂಡ, ಈಜುಗಾರರು ಸೇರಿದಂತೆ ಆಂಬ್ಯುಲೆನ್ಸ್ ಸ್ಥಳದಲ್ಲಿಯೇ ಇದ್ದು, ಸಂತ್ರಸ್ತರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ರಾಜೇಶ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.