ಬುಧವಾರ, ಆಗಸ್ಟ್ 10, 2022
20 °C

ಮಹಾರಾಷ್ಟ್ರದ ಪಾಲ್ಗರ್‌ನಲ್ಲಿ ಎರಡು ಬಾರಿ ಲಘು ಭೂಕಂಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಾಲ್ಗರ್‌: ಮಹಾರಾಷ್ಟ್ರದ ಪಾಲ್ಗರ್‌ ಜಿಲ್ಲೆಯಲ್ಲಿ ಎರಡು ಬಾರಿ ಲಘು ಭೂಕಂಪ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಸುಮಾರು ಅರ್ಧ ಗಂಟೆಯ ಅಂತರದಲ್ಲಿ ಈ ಕಂಪನಗಳು ದಾಖಲಾಗಿವೆ. 

ರಾತ್ರಿ 11.41ರಲ್ಲಿ ದಹನು ತಹಸಿಲ್‌ನಲ್ಲಿ (ತಾಲ್ಲೂಕು) ಮೊದಲಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪನದಲ್ಲಿ ಕಂಪನದ ತೀವ್ರತೆಯು 4.0 ದಾಖಲಾಗಿದೆ. ನಂತರ ಮಧ್ಯರಾತ್ರಿ 12.05 ಗಂಟೆಗೆ ತಲಸಾರಿ ತಹಸಿಲ್‌ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ನಲ್ಲಿ ಈ ಕಂಪನದ ತೀವ್ರತೆಯು 3.6ರಷ್ಟ ದಾಖಲಾಗಿದೆ ಎಂದು ಪಾಲ್ಗರ್‌ ಜಿಲ್ಲಾ ವಿಪತ್ತು ನಿಯಂತ್ರಣ ಕೋಶದ ಮುಖ್ಯಸ್ಥ ವಿವೇಕಾನಂದ ಕಡಮ್‌ ತಿಳಿಸಿದ್ದಾರೆ.

ಸದ್ಯದ ಮಟ್ಟಿಗೆ, ಭೂಕಂಪದಿಂದ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

‘ಭೂಕಂಪನದಿಂದ ಏನಾದರೂ ಹಾನಿ ಸಂಭವಿಸಿದೆಯೇ ಎಂಬುದರ ಕುರಿತು ದಹನು ಮತ್ತು ತಲಸಾರಿಯ ತಹಶೀಲ್ದಾರರು ಸಮೀಕ್ಷೆ ನಡೆಸಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಭೂಮಿ ಕಂಪಿಸಿದ್ದರಿಂದ ಆತಂಕಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದರು ಮತ್ತು ಕೆಲ ಸಮಯದವರೆಗೆ ಹೊರಗೇ ಉಳಿದಿದ್ದರು ಎಂದು ತಲಸಾರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪಾಲ್ಗರ್‌ ಜಿಲ್ಲೆಯಲ್ಲಿ, ಅದರಲ್ಲೂ ವಿಶೇಷವಾಗಿ ದಹನು ಮತ್ತು ತಲಸಾರಿ ತಹಸಿಲ್‌ಗಳಲ್ಲಿ 2018ರಿಂದ ಲಘು ಮತ್ತು ಮಧ್ಯಮ ತೀವ್ರತೆಯ ಭೂಕಂಪನಗಳು ಸಂಭವಿಸುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು