ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ

Last Updated 24 ಫೆಬ್ರುವರಿ 2021, 10:01 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.

ಶ್ರೀಗುಫ್ವಾರದ ಶಾಲ್ಗುಲ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು, ಶೋಧ ಕಾರ್ಯ ಆರಂಭಿಸಿದರು. ಈ ಸಂದರ್ಭದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆಗಳು ದಾಳಿ ನಡೆಸಿ, ಇಬ್ಬರನ್ನು ಹೊಡೆದುರುಳಿಸಿದರು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹತರಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಪತ್ತೆಯಾಗಬೇಕಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT