ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Last Updated 28 ಮೇ 2022, 13:58 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಜೊತೆಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜ್‌ಬೆಹಾರಾದ ಶಿಟಿಪೊರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿತ್ತು.

ಭದ್ರತಾ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭ ಭದ್ರತಾ ಪಡೆ ನಡೆಸಿದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ಯೆಯಾದ ಉಗ್ರರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT