ಪುಲ್ವಾಮ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಶ್ರೀನಗರ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿನ ಪುಲ್ವಾಮದ ಪಾಹೊ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಲಭ್ಯವಾದ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ.
ಈ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ. ಸದ್ಯಕ್ಕೆ ಇವರ ಗುರುತು ಮತ್ತು ಯಾವ ಸಂಘಟನೆಗೆ ಸೇರಿದವರು ಎಂಬುದು ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.