ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ

Last Updated 10 ಅಕ್ಟೋಬರ್ 2020, 13:06 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಕುಲ್ಗಾಂ ಜಿಲ್ಲೆಯ ಚಿನಿಗಂ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆ ಎನ್ನುವ ಖಚಿತ ಮಾಹಿತಿಯೊಂದಿಗೆ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದರು.

ಉಗ್ರರು ಅಡಗಿದ್ದ ಸ್ಥಳಕ್ಕೆ ಸಿಬ್ಬಂದಿ ಹತ್ತಿರವಾಗುತ್ತಿದ್ದಂತೆಯೇ, ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆ ಸಿಬ್ಬಂದಿಯ ಪ್ರತಿದಾಳಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.ಉಗ್ರರು ಯಾವ ಸಂಘಟನೆಗೆ ಸೇರಿದವರು ಎನ್ನುವುದು ಇನ್ನೂ ಪತ್ತೆಯಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT