ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Last Updated 10 ನವೆಂಬರ್ 2020, 9:13 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರರಿಬ್ಬರನ್ನು ಹೊಡೆದುರುಳಿಸಿದೆ.

ನಿಖರ ಮಾಹಿತಿ ಮೇರೆಗೆ ಸೇನೆಯ 34–ರಾಷ್ಟ್ರೀಯ ರೈಫಲ್ಸ್‌ ಮತ್ತು ಜಮ್ಮು–ಕಾಶ್ಮೀರದ ಪೊಲೀಸರು ಮಂಗಳವಾರ ಬೆಳಿಗ್ಗೆ ಕುಟ್ಪೊರಾ ಪ್ರದೇಶದಲ್ಲಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಸೇನೆಯು ದಾಳಿ ನಡೆಸಿದೆ ಎಂದು ಅವರು ಮಾಹಿತಿ ನೀಡಿದರು.

ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಸೋಪಿಯಾನ್‌ ಜಿಲ್ಲೆಯಲ್ಲಿ ಅಂರ್ತಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT