ಗುರುವಾರ , ಆಗಸ್ಟ್ 18, 2022
27 °C

ತಂದೆ–ತಾಯಿ ಮನವಿಗೆ ಸ್ಪಂದಿಸಿ ಶರಣಾದ ಉಗ್ರರು: ಕಾಶ್ಮೀರದ ರೋಚಕ ವಿಡಿಯೊ ನೋಡಿ

ಪಿಟಿಐ Updated:

ಅಕ್ಷರ ಗಾತ್ರ : | |

DH FILE

ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಂನಲ್ಲಿ ಬುಧವಾರ ನಡೆದ ಎನ್‌ಕೌಂಟರ್ ಸಂದರ್ಭದಲ್ಲಿ ಇಬ್ಬರು ಉಗ್ರರು ಶರಣಾಗಿದ್ದಾರೆ.

ಶರಣಾದ ಭಯೋತ್ಪಾದಕರು ಸ್ಥಳಿಯರಾಗಿದ್ದು, ಅವರ ಪೋಷಕರು ಬಂದು ಶಸ್ತ್ರಾಸ್ತ್ರ ತ್ಚಿಿಸುವಂತೆ ಮನವಿ ಮಾಡಿದ ಬಳಿಕ ಶರಣಾಗಿದ್ದಾರೆ.

ಏನಿದು ಘಟನೆ?:   ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಹಡಿಗಮ್‌ನಲ್ಲಿ ಇಬ್ಬರು ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭ ಸೇನಾಧಿಕಾರಿಗಳು ಉಗ್ರರ ಪೋಷಕರನ್ನು ಸ್ಥಳಕ್ಕೆ ಕರೆತಂದರು. ಶಸ್ತ್ರಾಸ್ತ್ರ ತ್ಯಜಿಸುವಂತೆ ಪೋಷಕರು ಮಾಡಿದ ಮನವಿಗೆ ಸ್ಪಂದಿಸಿದ ಉಗ್ರರು ಶರಣಾಗಿದ್ದಾರೆ. 

 

ಶರಣಾಗಿರುವ ಉಗ್ರರಿಂದ ಬಂದೂಕು, ಶಸ್ತ್ರಾಸ್ತ್ರ ಮತ್ತು ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು