ಸೋಮವಾರ, ಏಪ್ರಿಲ್ 12, 2021
32 °C

ಪುಲ್ವಾಮಾದಲ್ಲಿ ಶಸ್ತ್ರಾಸ್ತ್ರ ಒಪ್ಪಿಸಿ ಶರಣಾದ ಇಬ್ಬರು ಉಗ್ರರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ ವೇಳೆ ಸಿಕ್ಕಿಬಿದ್ದಿದ್ದ ಇಬ್ಬರು ಉಗ್ರರು ಶನಿವಾರ ಸೇನಾಧಿಕಾರಿಗಳ ಮುಂದೆ ಶಸ್ತ್ರಾಸ್ತ್ರ ಒಪ್ಪಿಸಿ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಆಧರಿಸಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ಜಿಲ್ಲೆಯ ಕಾಕಪೋರಾ ಪ್ರದೇಶದ ಲೆಲ್‌ಹಾರ್‌ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ಅಡಗಿದ್ದ ಉಗ್ರರು ಏಕಾಏಕಿ ಗುಂಡು ಹಾರಿಸಲು ಪ್ರಾರಂಭಿಸಿದಾಗ ಶೋಧ ಕಾರ್ಯಾಚರಣೆಗೆ ಎನ್‌ಕೌಂಟರ್‌ಗೆ ತಿರುಗಿತ್ತು. ರಾತ್ರಿಯಿಡೀ ಗುಂಡಿನ ಚಕಮಕಿಯ ಬಳಿಕ, ಇಬ್ಬರು ಉಗ್ರರು ತಮ್ಮ ಎರಡು ಎಕೆ ರೈಫಲ್‌ಗಳೊಂದಿಗೆ ಭದ್ರತಾ ಪಡೆಗಳ ಮುಂದೆ ಶರಣಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶರಣಾದ ಉಗ್ರರನ್ನು ಅಕೀಲ್ ಅಹ್ಮದ್ ಲೋನ್ ಮತ್ತು ರೂಫ್ ಉಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಅಕೀಲ್ ಅಹ್ಮದ್ ಲೋನ್ ಬಲಗಾಲಿನಲ್ಲಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಇಲ್ಲಿನ ಪೊಲೀಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು