ಫತೇಪುರ: ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಬ್ಬರು ಬಾಲಕಿಯರ ಮೇಲೆ ಆರು ಮಂದಿಯ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದೆ.
ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಫತೇಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಡಿ, 342, 323, 504, 506 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಗ್ರಾಮದ ಜಾತ್ರೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಬಾಲಕಿಯರ ಮೇಲೆ ಈ ಕೃತ್ಯ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಗಳಿಂದ ಖಚಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.