ಮಂಗಳವಾರ, ಡಿಸೆಂಬರ್ 7, 2021
24 °C

ಉತ್ತರಾಖಂಡ | ನೀರ್ಗಲ್ಲು ಕುಸಿತ: ಮೃತರ ಸಂಖ್ಯೆ 58ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಪೋವನ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದಿಂದ ಉಂಟಾದ ಪ್ರವಾಹಕ್ಕೆ  ಸಿಲುಕಿದ್ದವರ ಪತ್ತೆ ಕಾರ್ಯ 10ನೇ ದಿನವೂ ಮುಂದುವರಿದಿದ್ದು, ಮಂಗಳವಾರ ಎರಡು ಶವಗಳನ್ನು ಹೊರತೆಗೆಯಲಾಗಿದೆ.

ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿದೆ. ಇನ್ನೂ 146 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ ತಪೋವನ–ವಿಷ್ಣುಗಡ್ ಯೋಜನೆಯ ಸುರಂಗದಲ್ಲಿ 11 ಶವಗಳು ಪತ್ತೆಯಾಗಿವೆ.

ಚಮೋಲಿ ಜಿಲ್ಲೆಯ ತಪೋವನ ಸುರಂಗವನ್ನು ಕೇಂದ್ರೀಕರಿಸಿ ವಿವಿಧ ಏಜೆನ್ಸಿಗಳು ರಕ್ಷಣಾ ಕಾರ್ಯ ಕೈಗೊಂಡಿವೆ. ಅಲ್ಲಿ ಸುಮಾರು 30 ಕಾರ್ಮಿಕರು ಸಿಕ್ಕಿಬಿದ್ದಿರಬಹುದು ಎನ್ನಲಾಗಿದೆ.

ತಪೋವನ ವ್ಯಾಪ್ತಿಯಲ್ಲಿ ಇಂಡೊ-ಟಿಬೆಟಿಯನ್ ಬಾರ್ಡರ್ ಪೊಲೀಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು (ಎಸ್‌ಡಿಆರ್‌ಎಫ್‌) ಪರಿಹಾರ ಕಾರ್ಯಾಚರಣೆ ನಡೆಸುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು