ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಮತ್ತೆ ಎರಡು ಝಿಕಾ ವೈರಸ್ ಪ್ರಕರಣ ಪತ್ತೆ

ಒಟ್ಟು ಸೋಂಕಿನ ಪ್ರಕರಣ 21ಕ್ಕೆ ಏರಿಕೆ
Last Updated 13 ಜುಲೈ 2021, 10:54 IST
ಅಕ್ಷರ ಗಾತ್ರ

ತಿರುವನಂತಪುರ (ಪಿಟಿಐ): ಕೇರಳದಲ್ಲಿ ಮಹಿಳೆ ಸೇರಿದಂತೆ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗಲಿರುವುದು ಮಂಗಳವಾರ ದೃಢಪಟ್ಟಿದ್ದು, ಇದರಿಂದ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ.

‘ಪುಂಥುರಾದ 35 ವರ್ಷದ ಪುರುಷ ಹಾಗೂ ಸಷ್ಟಮಂಗಲಂನ 41 ವರ್ಷದ ಮಹಿಳೆಗೆ ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಝಿಕಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನರು ಎಚ್ಚರಿಕೆ ವಹಿಸಬೇಕು’ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

‘ಸೋಂಕಿತರ ರಕ್ತದ ಮಾದರಿಯನ್ನು ಸರ್ಕಾರಿ ವೈದ್ಯಕೀಯ ಕಾಲೇಜಿನ ವೈರಾಲಜಿ ಪ್ರಯೋಗಾಲಯ ಮತ್ತು ಕೊಯಮತ್ತೂರಿನ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗಿದೆ. ಸೋಮವಾರ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಝಿಕಾ ವೈರಸ್ ಪರೀಕ್ಷಾ ಕಾರ್ಯ ಆರಂಭಿಸಲಾಗಿದೆ. ಇದರಲ್ಲಿ ಒಟ್ಟು 15 ಜನರ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಒಬ್ಬ ವ್ಯಕ್ತಿಗೆ ಡೆಂಗಿ ಇರುವುದು ಪತ್ತೆಯಾಗಿದೆ. ಉಳಿದ 13 ಜನರ ಮಾದರಿಯಲ್ಲಿ ಯಾವುದೇ ವೈರಸ್ ಇರುವುದು ದೃಢಪಟ್ಟಿಲ್ಲ’ ಎಂದು ವೀಣಾ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT