ಶುಕ್ರವಾರ, ಅಕ್ಟೋಬರ್ 23, 2020
21 °C
ಚಿತ್ರಕೂಟ: ದಲಿತ ಬಾಲಕಿ ಅತ್ಯಾಚಾರ ಪ್ರಕರಣ

ದಲಿತ ಬಾಲಕಿ ಅತ್ಯಾಚಾರ ಕೇಸ್: ಕರ್ತವ್ಯದಲ್ಲಿ ನಿರ್ಲಕ್ಷ್ಯ,ಇಬ್ಬರು ಪೊಲೀಸರ ಅಮಾನತು

ಪಿಟಿಐ Updated:

ಅಕ್ಷರ ಗಾತ್ರ : | |

ಚಿತ್ರಕೂಟ(ಉತ್ತರ ಪ್ರದೇಶ): ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕಾರ್ವಿ ಪೊಲೀಸ್ ಠಾಣೆಯ ಸರಿಯಾಯ ಪೊಲೀಸ್‌ ಔಟ್‌ಪೋಸ್ಟ್‌ ಉಸ್ತುವಾರಿ‌  ಸಬ್‌ ಇನ್‌ಸ್ಪೆಕ್ಟರ್‌ ಅನಿಲ್ ಸಾಹು ಮತ್ತು ಎಸ್‌ಎಚ್‌ಒ ಜೈಶಂಕರ್ ಸಿಂಗ್ ಅವರನ್ನು ಅಮಾನತುಗೊಳಿಸಿರುವುದಾಗಿ ಚಿತ್ರಕೂಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್‌ ತಿಳಿಸಿದ್ದಾರೆ.

ಚಿತ್ರಕೂಟ ವಲಯದ ಐಜಿಪಿ ಕೆ. ಸತ್ಯನಾರಾಯಣ ಮತ್ತು ಜಿಲ್ಲಾಧಿಕಾರಿ ಶೇಷಮಣಿ ಪಾಂಡೆ ಅವರು ಸಂತ್ರಸ್ತೆ ಕುಟುಂಬದವರನ್ನು ಭೇಟಿಯಾಗಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಿತ್ತಲ್ ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮಾಜಿ ಪ್ರಧಾನನೊಬ್ಬರ ಮಗ ಮತ್ತು ಇಬ್ಬರನ್ನು ಮಂಗಳವಾರ ಬಂಧಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ: ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು