ಶ್ರೀನಗರ: ಇತ್ತೀಚೆಗೆ ಕಾಶ್ಮೀರವನ್ನು ನುಸುಳಿದ್ದ ಪಾಕಿಸ್ತಾನ ಮೂಲದ ಇಬ್ಬರು ಲಷ್ಕರ್–ಎ–ತೈಯಬ(ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರನ್ನು ಶುಕ್ರವಾರ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹತ್ಯೆಗೈದಿವೆ.

‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬಂಡಿಪೋರಾ ಜಿಲ್ಲೆಯ ಬ್ರಾರ್ ಸಮೀಪದ ಅರಗಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾಪಡೆಗಳ ಪ್ರತಿದಾಳಿಗೆ ಇಬ್ಬರು ಉಗ್ರರು ಹತರಾದರು’ ಎಂದು ಪೊಲೀಸರು ತಿಳಿಸಿದರು.

‘ಹತ್ಯೆಯಾದ ಇಬ್ಬರು ಉಗ್ರರು ಗುರುತು ತಕ್ಷಣಕ್ಕೆ ಖಚಿತಪಡಿಸಲು ಸಾಧ್ಯವಿಲ್ಲ. ಮೇ 11ರಂದು ಸಲಿಂದರ್ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಈ ಇಬ್ಬರು ಉಗ್ರರು ಪರಾರಿಯಾಗಿದ್ದರು’ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್ ಹೇಳಿದರು.

ಇದಕ್ಕೂ ಮುನ್ನ ಐಜಿಪಿ ‘ಹತ್ಯೆಯಾದ ಇಬ್ಬರು ಉಗ್ರರು ಪಾಕಿಸ್ತಾನದ ಎಲ್ಇಟಿಗೆ ಸೇರಿದವರಾಗಿದ್ದಾರೆ’ ಎಂದು ಅವರು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.