ಮಂಗಳವಾರ, ಮೇ 24, 2022
31 °C

ಸಿಂಘು ಹತ್ಯೆ ಪ್ರಕರಣ ತನಿಖೆಗೆ ಎರಡು ಎಸ್‌ಐಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಡ (ಪಿಟಿಐ): ಸಿಂಘು ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಸಮೀಪ ನಡೆದ ದಲಿತ ಸಿಖ್ ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮೂವರನ್ನು, ಇಲ್ಲಿನ ನ್ಯಾಯಾಲಯವು ಆರು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದ ತನಿಖೆಗೆ ಹರಿಯಾಣ ಸರ್ಕಾರವು ಎರಡು ವಿಶೇಷ ತನಿಖಾ ತಂಡಗಳನ್ನು (ಎಸ್‌ಐಟಿ) ರಚಿಸಿದೆ.

ಹತ್ಯೆಗೆ ಸಂಬಂಧಿಸಿದಂತೆ ಶುಕ್ರವಾರ ಸಂಜೆ ಒಬ್ಬ ಆರೋಪಿ ಸೋನಿಪತ್ ಪೊಲೀಸರಿಗೆ ಶರಣಾಗಿದ್ದ. ನ್ಯಾಯಾಲಯವು, ಆ ಆರೋಪಿಯನ್ನು ಈಗಾಗಲೇ ಪೊಲೀಸ್ ಬಂಧನಕ್ಕೆ ನೀಡಿದೆ. ಇನ್ನೂ ಇಬ್ಬರು ಆರೋಪಿಗಳು ಶನಿವಾರ ಪೊಲೀಸರಿಗೆ ಶರಣಾಗಿದ್ದರು. ಶನಿವಾರ ಸಂಜೆ ನಿಹಾಂಗರ ನಾಯಕ ನಾರಾಯಿಣ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದರು. ಈ ಮೂವರನ್ನೂ ಭಾನುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಕೃತ್ಯವನ್ನು ಮರುಸೃಷ್ಟಿಸಲು ಮತ್ತು ಕೃತ್ಯದ ಸ್ಥಳದಲ್ಲಿನ ಸಾಕ್ಷ್ಯಗಳನ್ನು ಪತ್ತೆ ಮಾಡಲು ಆರೋಪಿಗಳು ಪೊಲೀಸರ ಬಂಧನದಲ್ಲಿರುವುದು ಅನಿವಾರ್ಯ. ಹೀಗಾಗಿ ಅವರನ್ನು ಪೊಲೀಸ್ ಬಂಧನಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯವನ್ನು ಕೋರಿದ್ದರು. ಈ ಮನವಿಯನ್ನು ನ್ಯಾಯಾಲಯವು ಮಾನ್ಯ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು