ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ ರಾಯಭಾರ ಕಚೇರಿ ಸಮೀಪ ಸ್ಫೋಟ: ಸಿಸಿಟಿವಿಯಲ್ಲಿ ಇಬ್ಬರ ದೃಶ್ಯ ಸೆರೆ

Last Updated 30 ಜನವರಿ 2021, 8:36 IST
ಅಕ್ಷರ ಗಾತ್ರ

ನವದೆಹಲಿ: ಇಸ್ರೇಲ್‌ ರಾಯಭಾರ ಕಚೇರಿ ಸಮೀಪ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಕ್ಯಾಬ್‌ನಿಂದ ಇಳಿದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಆ ವ್ಯಕ್ತಿಗಳಿಗೆ ಸ್ಫೋಟದ ಜತೆ ನಂಟಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ದೆಹಲಿ ಪೊಲೀಸ್ ವಿಶೇಷ ದಳವು ಕ್ಯಾಬ್ ಚಾಲಕನನ್ನು ಸಂಪರ್ಕಿಸಿ ಆ ಇಬ್ಬರು ವ್ಯಕ್ತಿಗಳ ಬಗ್ಗೆ ವಿಚಾರಿಸಿದೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಆಧಾರದಲ್ಲಿ ಶಂಕಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಸ್ಫೋಟದ ಬಳಿಕ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ಸ್ಫೋಟವು ಯಾವುದೋ ದೊಡ್ಡ ಸಂಚಿನ ಭಾಗವಾಗಿರುವ ಸಾಧ್ಯತೆಯೂ ಇದೆ ಎಂದು ಮೂಲಗಳು ಅಭಿಪ್ರಾಯಪಟ್ಟಿವೆ.

‘ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಿರುವ ಬಗ್ಗೆ ವಿಧಿವಿಜ್ಞಾನ ತಜ್ಞರ ತಂಡಕ್ಕೆ ಪುರಾವೆ ದೊರೆತಿದೆ. ಒಂದು ವೇಳೆ ಸಂಚುಕೋರರು ಆರ್‌ಡಿಎಕ್ಸ್‌ ಬಳಸಿದ್ದಲ್ಲಿ ಪರಿಣಾಮ ಇನ್ನೂ ತೀವ್ರವಾಗಿರುತ್ತಿತ್ತು’ ಎಂದು ಮೂಲಗಳು ಹೇಳಿವೆ.

ಸ್ಫೋಟ ಸಂಭವಿಸಿದ ಪ್ರದೇಶದ ಸಮೀಪದ ಮರವೊಂದರ ಹಿಂದೆ ಕ್ಯಾಮರಾ ಒಂದನ್ನು ಅಡಗಿಸಿಟ್ಟಿರುವುದೂ ಪೊಲೀಸರ ಗಮನಕ್ಕೆ ಬಂದಿದೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಅರ್ಧ ಸುಟ್ಟ ಗುಲಾಬಿ ಬಣ್ಣದ ಸ್ಕಾರ್ಫ್‌ ಮತ್ತು ಇಸ್ರೇಲ್ ರಾಯಭಾರಿಗೆ ಸಂಬಂಧಿಸಿದ ಕವರ್ ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಯೂ ಪೊಲೀಸರಿಗೆ ದೊರೆತಿದೆ. ಈ ವಿಚಾರವಾಗಿ ತನಿಖೆ ಪ್ರಗತಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT