ಕೊಚ್ಚಿ: ತೀವ್ರವಾದ ಗ್ಯಾಸ್ಟ್ರಿಕ್ ಸಮಸ್ಯೆ ಸೃಷ್ಟಿಸುವ ನೋರೊ ವೈರಸ್ ಸೋಂಕು ಕೇರಳದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ತಗುಲಿದೆ.
ಕಕ್ಕನಾಡು ಬಳಿಯ ಶಾಲೆಯ 1 ಮತ್ತು 2ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಲೆಯ 62 ವಿದ್ಯಾರ್ಥಿಗಳು ಮತ್ತು ಕೆಲ ಪೋಷಕರಲ್ಲೂ ಸೋಂಕಿನ ಲಕ್ಷಣಗಳು ಕಂಡುಬಂದಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಇದೊಂದು ವೈರಲ್ ಸೋಂಕಾಗಿದ್ದು, ತೀವ್ರ ವಾಂತಿ ಮತ್ತು ಭೇದಿ ಕಾಡುತ್ತದೆ.
‘ಸದ್ಯ ಸೋಂಕಿತ ಇಬ್ಬರೂ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯ ಅಧಿಕಾರಿಗಳ ಮೇಲ್ವಿಚಾರಣೆ ಬಳಿಕ ಸೋಂಕು ಕಂಡುಬಂದ ಶಾಲೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಶಾಲೆಯ ಸ್ಯಾನಿಟೈಸೇಶನ್ ಸಹ ನಡೆಯುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೋಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವುದರಿಂದ ಆರೋಗ್ಯ ಇಲಾಖೆ ತಡೆ ಕ್ರಮಗಳನ್ನು ಕೈಗೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.