ಶನಿವಾರ, ಜನವರಿ 29, 2022
17 °C

ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಸ್ಬಯಾರ್ ಪ್ರದೇಶದಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ಯೆಯಾದ ಭಯೋತ್ಪಾದಕರ ಗುರುತು ಮತ್ತು ಭಯೋತ್ಪಾದಕ ಸಂಘಟನೆಗಳ ಜೊತೆಗಿನ ಸಂಬಂಧವನ್ನು ಪತ್ತೆಹಚ್ಚಲಾಗುತ್ತಿದೆ. ಅಡಗಿರುವ ಉಗ್ರರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಯೋತ್ಪಾದಕರು ಅಡಗಿರುವ ಬಗ್ಗೆ ಸ್ಪಷ್ಟ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು.

ಭಯೋತ್ಪಾದಕರು ಅಡಗಿರುವ ಸ್ಥಳವನ್ನು ಸುತ್ತುವರಿದ ಭದ್ರತಾ ಪಡೆಗಳು ಭಾರೀ ಪ್ರಮಾಣದ ಗುಂಡಿನ ದಾಳಿ ನಡೆಸಿವೆ ಎಂದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು