ಜಮ್ಮು ಮತ್ತು ಕಾಶ್ಮೀರ | ಕುಲ್ಗಾಂ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬುಧವಾರ ರಾತ್ರಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರೆಡ್ವಾನಿ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಗುಂಡು ಹಾರಿಸಿದರು. ಈ ವೇಳೆ ಎನ್‌ಕೌಂಟರ್ ಭುಗಿಲೆದ್ದಿದೆ. ಗುರುವಾರ ಮುಂಜಾನೆ ವರೆಗೂ ಮುಂದುವರಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರ ಬಲಿಯಾಗಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.
ಇವರು ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದ ಉಗ್ರರು ಎಂಬುದು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
ನಿನ್ನೆ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೊಬ್ಬ ಬಲಿಯಾಗಿದ್ದನು.
#UPDATE | Two unidentified terrorists neutralized in the encounter that broke out between security forces and terrorists at the Redwani area of Kulgam. The search operation is underway: Kashmir Zone Police
— ANI (@ANI) December 15, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.