ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರ: ಮೂವರು ಡ್ರಗ್‌ ಪೆಡ್ಲರ್‌ಗಳ ಬಂಧನ

Last Updated 19 ಸೆಪ್ಟೆಂಬರ್ 2021, 19:31 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಮತ್ತು ಉಧಂಪುರ ಜಿಲ್ಲೆಗಳಲ್ಲಿ ಮಾದಕ ದ್ರವ್ಯಗಳನ್ನು ಮಾರುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಅವರಿಂದ 2.5 ಕೆಜಿ ಗಾಂಜಾ ಮತ್ತು 21.5 ಕೆ.ಜಿ ಗಸಗಸೆಯನ್ನು ಜಪ್ತಿ ಮಾಡಲಾಗಿದೆ. ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದ ಡೊಮೇಲ್‌ನಲ್ಲಿ ರೇಖಾ ದೇವಿ ಮತ್ತು ಮಾಯಾ ಮಿರ್‌ ಭಾನುವಾರ ಬೆಳಿಗ್ಗೆ ಅನುಮಾನಸ್ಪದ ರೀತಿಯಲ್ಲಿ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಅವರನ್ನು ತಡೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಮಾಯಾ ಅವರ ಚೀಲದಲ್ಲಿ 1.9 ಕೆಜಿ ಗಾಂಜಾ, ದೇವಿ ಅವರ ಬಳಿ 750 ಗ್ರಾಂ ಗಾಂಜಾ ದೊರೆತಿದೆ. ಇಬ್ಬರ ಮೇಲೆ ಮಾದಕ ದ್ರವ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ವಕ್ತಾರರು ಹೇಳಿದರು.ಈ ವರ್ಷದ ಮಾರ್ಚ್‌ನಿಂದ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 156 ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿ ಅವರ ವಿರುದ್ಧ 120 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT