ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ ಸಂಪರ್ಕದ ಆರೋಪ: ಇಬ್ಬರು ಮಹಿಳೆಯರ ಬಂಧನ

Last Updated 17 ಆಗಸ್ಟ್ 2021, 12:11 IST
ಅಕ್ಷರ ಗಾತ್ರ

ಕಣ್ಣೂರು (ಕೇರಳ): ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪಿನ ಸಿದ್ಧಾಂತವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಉಪನಗರ ಠಾಣಾದಲ್ಲಿ ಈ ಇಬ್ಬರು ಮಹಿಳೆಯರನ್ನು ಅವರ ಮನೆಗಳಲ್ಲಿಯೇ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಗುಂಪಿನ ಸಕ್ರಿಯ ಸದಸ್ಯರಾಗಿದ್ದ ಅವರಿಬ್ಬರು ಐಎಸ್‌ ಸಿದ್ಧಾಂತವನ್ನು ಕ್ರೊನಿಕಲ್‌ ಫೌಂಡೇಷನ್‌ ಎಂಬ ಸಾಮಾಜಿಕ ಮಾಧ್ಯಮ ವೇದಿಕೆ ಮೂಲಕ ಪ್ರಚಾರ ಮಾಡಿದ್ದಾರೆ ಎಂದು ಗೊತ್ತಾಗಿದೆ. ಈ ಗುಂಪಿನ ಇನ್ನೊಬ್ಬ ಸದಸ್ಯನನ್ನು ಎನ್‌ಐಎ, ಈ ವರ್ಷದ ಮಾರ್ಚ್‌ನಲ್ಲಿ ಕಣ್ಣೂರಿನಲ್ಲಿ ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT