ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯಿಂದ ದಕ್ಷಿಣ ಭಾರತದ ಇಬ್ಬರು ನಟಿಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ನೌಪಡ ಪ್ರದೇಶದ ಫ್ಲ್ಯಾಟ್ನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

‘ಅಮೃತ್ ನಗರದ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪೊಲೀಸರು ಗ್ರಾಹಕರ ವೇಷದಲ್ಲಿ ತೆರಳಿ ಕಾರ್ಯಾಚರಣೆ ನಡೆಸುವ ಮೂಲಕ ದಂಧೆ ಬಯಲಿಗೆಳೆದಿದ್ದಾರೆ’ ಎಂದು ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣ ಕೊಕ್ನಿ ಹೇಳಿದ್ದಾರೆ.

ಬಂಧಿತ ಆರೋಪಿಗಳನ್ನು ಹಸೀನಾ ಮೆಮನ್, ಸ್ವೀಟಿ, ವಿಶಾಲ್ ಅಲಿಯಾಸ್ ಸುನಿಲ್ಕುಮಾರ್ ಉತ್ತಮ್ಚಾಂದ್ ಜೈನ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಂದ ₹2.14 ಲಕ್ಷ ನಗದು ಮತ್ತು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ... ಕೋವಿಡ್ ನಿಯಮ ಉಲ್ಲಂಘನೆ: ಟೈಗರ್ ಶ್ರಾಫ್ ಮತ್ತು ದಿಶಾ ವಿರುದ್ಧ ಎಫ್ಐಆರ್ ದಾಖಲು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.