ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ ಭಾರತ–ಯುಎಇ ಸಹಿ

Last Updated 19 ಫೆಬ್ರುವರಿ 2022, 1:33 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮತ್ತು ಯುಎಇ ಶುಕ್ರವಾರ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ (ಸೆಪಾ) ಸಹಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಎಇ ರಾಜಕುಮಾರ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್‌ ವರ್ಚುವಲ್ ಮಾತುಕತೆ ನಡೆಸಿದ ಬಳಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಲಾಜಿಸ್ಟಿಕ್ಸ್, ಆರೋಗ್ಯ, ಆತಿಥ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಯುಎಇ ನಮ್ಮ ದೇಶದಲ್ಲಿ, ವಿಶೇಷವಾಗಿ ಜಮ್ಮು–ಕಾಶ್ಮೀರದಲ್ಲಿ ಹೂಡಿಕೆ ಮಾಡುವುದನ್ನು ಭಾರತ ಸ್ವಾಗತಿಸುತ್ತದೆ ಎಂದು ಮೋದಿ ಹೇಳಿದ್ದಾರೆ. ಯುಎಇಯಲ್ಲಿ ಐಐಟಿ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಆರಂಭಿಸುವುದಕ್ಕೂ ಉಭಯ ನಾಯಕರು ಸಮ್ಮತಿ ಸೂಚಿಸಿದ್ದಾರೆ.

ವಾಣಿಜ್ಯ, ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಹಾಗೂ ಯುಎಇ ವಾಣಿಜ್ಯ, ಕೈಗಾರಿಕೆ ಸಚಿವ ಅಬ್ದುಲ್ಲಾ ಬಿನ್ ತಖ್ ಅಲ್ ಮರ್ರಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಒಪ್ಪಂದದಿಂದ ಉಭಯ ದೇಶಗಳ ನಡುವಣ ಸರಕು ವಿಭಾಗದ ದ್ವಿಪಕ್ಷೀಯ ವಹಿವಾಟು 6,000 ಕೋಟಿ ಡಾಲರ್‌ನಿಂದ 10,000 ಕೋಟಿ ಡಾಲರ್‌ಗೆ ಹೆಚ್ಚಳವಾಗಲಿದೆ. ಸೇವಾ ಕ್ಷೇತ್ರದ ದ್ವಿಪಕ್ಷೀಯ ವಹಿವಾಟು 1,500 ಕೋಟಿ ಡಾಲರ್‌ಗೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದು ಕೋವಿಡ್‌ ಸಾಂಕ್ರಾಮಿಕಕ್ಕಿಂತ ಪೂರ್ವದಲ್ಲಿ ಇದ್ದ ವಹಿವಾಟಿಗಿಂತ ಎರಡು ಪಟ್ಟು ಹೆಚ್ಚು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT