ಮಂಗಳವಾರ, ಆಗಸ್ಟ್ 9, 2022
23 °C

ಉದಯಪುರದ ಟೈಲರ್‌ ಹತ್ಯೆ ಪ್ರಕರಣ ನನ್ನನ್ನು ಬೆಚ್ಚಿಬೀಳಿಸಿದೆ: ಹರಭಜನ್‌ ಸಿಂಗ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್‌ ಹತ್ಯೆಯನ್ನು ರಾಜ್ಯಸಭಾ ಸದಸ್ಯ, ಮಾಜಿ ಕ್ರಿಕೆಟಿಗ ಹರಭಜನ್‌ ಸಿಂಗ್‌ ಖಂಡಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ‘ಉದಯಪುರದಲ್ಲಿ ನಡೆದ ಭಯಾನಕ ಘಟನೆ ನನ್ನನ್ನು ಬೆಚ್ಚಿಬೀಳಿಸಿದೆ’ ಎಂದು ತಿಳಿಸಿದ್ದಾರೆ.

‘ಯಾವುದೇ ಸುಸಂಸ್ಕೃತ ಸಮಾಜದಲ್ಲಿ ನಡೆಯಬಾರದ ಘೋರ ಅಪರಾಧವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಪರಾಧ ಎಸಗಿದವರ ವಿರುದ್ಧ ಕಠಿಣ ಮತ್ತು ಶೀಘ್ರ ಕ್ರಮ ಜರುಗಿಸಬೇಕು’ ಎಂದು ಹರಭಜನ್‌ ಸಿಂಗ್‌ ಒತ್ತಾಯಿಸಿದ್ದಾರೆ. \

ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು. 

ಕೃತ್ಯದ ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ ದುಷ್ಕರ್ಮಿಗಳು ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊದಲ್ಲಿ ಕಂಡುಬಂದಿರುವ ವ್ಯಕ್ತಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವನ್ನೂ ಓದಿ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು