ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಅನರ್ಹತೆ ಪ್ರಜಾಪ್ರಭುತ್ವದ ಹತ್ಯೆ, ಸರ್ವಾಧಿಕಾರ ಅಂತ್ಯದ ಆರಂಭ: ಉದ್ಧವ್

Last Updated 24 ಮಾರ್ಚ್ 2023, 11:29 IST
ಅಕ್ಷರ ಗಾತ್ರ

ಮುಂಬೈ: ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಹತ್ಯೆ ಹಾಗೂ ಸರ್ವಾಧಿಕಾರದ ಅಂತ್ಯದ ಆರಂಭ ಎಂದು ಶಿವಸೇನಾ(ಉದ್ಧವ್ ಬಾಳಾಠಾಕ್ರೆ ಬಣ) ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಕೆಲವರು ದೇಶವನ್ನು ಲೂಟಿ ಮಾಡುತ್ತಿರುವಾಗ, ಕಳ್ಳರನ್ನು ಕಳ್ಳ ಎನ್ನುವುದು ತಪ್ಪೇ ಎಂದು ಅವರು ಪ್ರಶ್ನಿಸಿದ್ದಾರೆ.

‘ಇದು ಪ್ರಜಾಪ್ರಭುತ್ವದ ಹತ್ಯೆ. ಎಲ್ಲ ಸಂಸ್ಥೆಗಳೂ ಒತ್ತಡದಲ್ಲಿವೆ. ಇದು ಸರ್ವಾಧಿಕಾರದ ಅಂತ್ಯದ ಆರಂಭ. ಈ ಹೋರಾಟವು ಸರಿಯಾದ ದಿಕ್ಕಿನಲ್ಲಿ ಸಾಗಬೇಕಿದೆ’ ಎಂದು ಅವರು ಹೇಳಿದ್ದಾರೆ.

2019ರಲ್ಲಿ ಮೋದಿ ಉಪನಾಮವನ್ನು ವ್ಯಂಗ್ಯ ಮಾಡಿದ್ದ ಆರೋಪ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ನಿನ್ನೆ ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ, ಶುಕ್ರವಾರ ಲೋಕಸಭೆ ಸಚಿವಾಲಯವು ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಉನ್ನತ ನ್ಯಾಯಾಲಯವು ಅವರನ್ನು ಶಿಕ್ಷೆಯನ್ನು ತಡೆಹಿಡಿಯದ ಹೊರತು ರಾಹುಲ್ ಗಾಂಧಿ 8 ವರ್ಷ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT